ಮಡಿಕೇರಿ, ಅ. 24: 2019ರ ನವೆಂಬರ್ 1ರಂದು ಆಚರಿಸ ಲಾಗುವ ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳು, ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಿ ಸರಕಾರದ ಮುಖ್ಯ ಕಾರ್ಯ ದರ್ಶಿಗಳು ಆದೇಶ ಹೊರಡಿಸಿ ದ್ದಾರೆ. ಕೊಡಗು ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಹೆಚ್ಚುವರಿ ಉಸ್ತುವಾರಿ ಸಚಿವರಾಗಿರುವ ವಿ. ಸೋಮಣ್ಣ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರು ವದರಿಂದ ಅವರನ್ನು ಮೈಸೂರಿಗೆ ನಿಯೋಜಿಸಲಾಗಿದೆ.