ಮಡಿಕೇರಿ, ಅ.24 : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ದೊರೆತ ಹಿನ್ನೆಲೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಸಂಭ್ರಮಾಚರಿಸಿತು.
ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಅವರ ಒಳಿತಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕÀ ವೆಂಕಪ್ಪಗೌಡ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕÀ ಟಿ.ಎಂ.ಶಾಹಿದ್, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಗೀತಾ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕÀ ತೆನ್ನಿರಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಪ್ರಮುಖರಾದ ಕಾವೇರಮ್ಮ ಸೋಮಣ್ಣ, ಪ್ರಕಾಶ್ ಆಚಾರ್ಯ, ನೆರವಂಡ ಉಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಂಡಿರ ಸದಾ ಮುದ್ದಪ್ಪ, ಉದಯ ಕುಮಾರ್, ಕಾನೆಹಿತ್ಲು ಮೊಣ್ಣಪ್ಪ, ಜಪ್ರುಲ್ಲ, ಮುದ್ದುರಾಜ್, ಸ್ವರ್ಣಲತಾ ಹಾಗೂ ಕಾರ್ಯಕರ್ತರು ಹಾಜರಿದ್ದರು.