ಕುಶಾಲನಗರ, ಅ. 24: ಕುಶಾಲನಗರದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸ್ಥಳೀಯ ಸಂಗಮ ವಾಹಿನಿಯ ವಾರ್ಷಿಕೋತ್ಸವದ ಅಂಗವಾಗಿ ಹೆಜ್ಜೆ-ಗೆಜ್ಜೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.

ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಟಿವಿ ಚಾನಲ್‍ಗಳ ಮೂಲಕ ಮನರಂಜನೆಯೊಂದಿಗೆ ಸ್ಥಳೀಯ ಆಗುಹೋಗುಗಳ ಮಾಹಿತಿ ದೊರೆಯುತ್ತಿದೆ. ಅನಾರೋಗ್ಯ ಪೈಪೋಟಿಯಿಂದ ಸಂಸ್ಥೆಯ ಬೆಳವಣಿಗೆಗೆ ಕುಂದು ಬರುವದರೊಂದಿಗೆ ಸಮಾಜದ ಸ್ವಾಸ್ಥ್ಯ ಕೂಡ ಕೆಡುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ಪ್ರಜ್ಞೆಯೊಂದಿಗೆ ಪತ್ರಿಕೆ ಮಾಧ್ಯಮಗಳು ಕೆಲಸ ನಿರ್ವಹಿಸಬೇಕಿದೆ ಎಂದರು. ಚಲನಚಿತ್ರ ನಟಿ ಹಾಗೂ ನಿರ್ಮಾಪಕಿ ವಿಜಯಲಕ್ಷ್ಮಿ ಸಿಂಗ್ ಪಾಲ್ಗೊಂಡು ವಾಹಿನಿಗೆ ಶುಭ ಹಾರೈಸಿದರು. ಜಿ.ಪಂ. ಮಾಜಿ ಸದಸ್ಯ ವಿ.ಪಿ. ಶಶಿಧರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್. ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ. ಚಂದ್ರಕಲಾ, ಟಿವಿ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ನೂತನ್‍ಮೋಹನ್, ಪ್ರಧಾನ ಸಂಪಾದಕ ಹೆಚ್.ಎಂ. ರಘು ಮತ್ತಿತರರು ಇದ್ದರು. ಕಾರ್ಯಕ್ರಮದ ನಂತರ ವಿವಿಧ ತಂಡಗಳಿಂದ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು.