ಸೋಮವಾರಪೇಟೆ, ಅ. 24: ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಯುವ ಒಕ್ಕೂಟ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲೂಕು ಯುವ ಒಕ್ಕೂಟ ಸೋಮವಾರಪೇಟೆ, ವೀರಾಜಪೇಟೆ, ಮಡಿಕೇರಿ ಹಾಗೂ ಕಿರಗಂದೂರು ಪ್ರಕೃತ್ತಿ ಯುವತಿ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ತಾ. 27 ರಂದು ಜಿಲ್ಲಾಮಟ್ಟದ ಯುವಜನೋತ್ಸವ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪಿ.ಪಿ. ಸುಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಕೊಡವ ಸಮಾಜದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯ ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ವಹಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಸಮಾರೋಪ ಸಮಾರಂಭ ಸಂಜೆ 4.30ಕ್ಕೆ ನಡೆಯಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೆಚ್.ಎನ್. ತಂಗಮ್ಮ, ಸದಸ್ಯರಾದ ಬಿ.ಬಿ. ಸತೀಶ್, ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಏಜಣ್ಣ ಸೇರಿದಂತೆ ಇತರರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಯುವಕ ಹಾಗೂ ಯುವತಿಯರಿಗೆ ಜಾನಪದ ನೃತ್ಯ ಸ್ಪರ್ಧೆ ನಡೆಯಲಿದೆ. 15 ನಿಮಿಷಗಳ ಕಾಲಾವಕಾಶವಿದ್ದು, ಧ್ವನಿಸುರುಳಿ ಬಳಸಲು ಅವಕಾಶ ಇರುವದಿಲ್ಲ. ಜಾನಪದ ಗೀತೆಯಲ್ಲಿ 7 ನಿಮಿಷ ಕಾಲಾವಕಾಶವಿರುತ್ತದೆ. ಏಕಾಂಗಿ ನಾಟಕ, ಶಾಸ್ತ್ರೀಯ ಗಾಯನ, ಶಾಸ್ತ್ರೀಯ ವಾದನ, ಹಾರ್ಮೋನಿಯಮ್ ವಾದನ, ಗಿಟಾರ್ ವಾದನ, ಶಾಸ್ತ್ರೀಯ ನೃತ್ಯ, ಆಶುಭಾಷಣ ಸ್ಪರ್ಧೆ ನಡೆಯಲಿದೆ. 14 ವರ್ಷದ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅವಕಾಶವಿದ್ದು, ಶಾಲೆಯಿಂದ ವಯಸ್ಸಿನ ದೃಢೀಕರಣ ತರಬೇಕಿದೆ ಎಂದರು.

ಅಂದು ಬೆಳಿಗ್ಗೆ 9 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬೇಕಿದೆ. ಎಲ್ಲ ಸ್ಪರ್ಧೆಗಳಲ್ಲಿ ಮೊದಲ ಸ್ಥಾನಗಳಿಸಿದ ಸ್ಪರ್ಧಿಗಳು ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆರ್ಹತೆಯನ್ನು ಪಡೆಯಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. 9481213920, 9480747835 ಸಂಪರ್ಕಿಸಲು ಕೋರಿದ್ದಾರೆ. ಗೋಷ್ಠಿಯಲ್ಲಿ ತಾಲೂಕು ಘಟಕದ ಅಧ್ಯಕ್ಷೆ ಚಂದ್ರಿಕ, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹರೀಶ್, ತಾಲೂಕು ಘಟಕದ ಉಪಾಧ್ಯಕ್ಷ ಹೆಚ್.ಕೆ. ಮಹೇಶ್, ಖಜಾಂಚಿ ಮೀರಾ ರಾಜೇಂದ್ರ ಉಪಸ್ಥಿತರಿದ್ದರು.