ಸೋಮವಾರಪೇಟೆ, ಅ. 24: ಸೋಮವಾರಪೇಟೆ-ನಗರಳ್ಳಿ, ಕೂತಿ, ತೋಳೂರು ಶೆಟ್ಟಳ್ಳಿ ಮಾರ್ಗದಲ್ಲಿ ನೂತನ ಸರ್ಕಾರಿ ಬಸ್ ಸೇವೆಗೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಗ್ರಾಮೀಣ ಭಾಗಕ್ಕೆ ಬಸ್ ಸಂಪರ್ಕ ಕಲ್ಪಿಸುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡ ಮೇರೆಗೆ, ಈ ಮಾರ್ಗದಲ್ಲಿ ಬೆಳಿಗ್ಗೆ 8.15ಕ್ಕೆ ಮತ್ತು ಸಂಜೆ 4 ಗಂಟೆಗೆ ಬಸ್ ಸಂಪರ್ಕವನ್ನು ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಪ್ರಯೋಜನವಾಗಲಿದೆ ಎಂದು ಶಾಸಕರು ತಿಳಿಸಿದರು.