ಮಡಿಕೇರಿ, ಅ. 24: ಜಿಲ್ಲಾಡಳಿತ, ಜಿ.ಪಂ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ, ಸಾರ್ವ ಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಮೈಕಲರ ಪ್ರೌಢ ಶಾಲೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ಪರಿಸರ ಮಾಲಿನ್ಯವನ್ನು ಉಂಟು ಮಾಡುವ ಪಟಾಕಿಯನ್ನು ತ್ಯಜಿಸಿ, ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದರು.
ದೀಪಾವಳಿ ಆಚರಣೆ ಕುರಿತು ಕರಪತ್ರ ಬಿಡುಗಡೆಗೊಳಿಸಿದ ಗ್ರೀನ್‍ಸಿಟಿ ಫೋರಂನ ಜಯ ಚಿಣ್ಣಪ್ಪ ಮಾತನಾಡಿ, ಪಟಾಕಿಗಳು ಹೊರ ಸೂಸುವ ವಿಷಯುಕ್ತ ಅನಿಲಗಳು ಆರೋಗ್ಯ ಹಾಗೂ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ ಎಂದರು.
ಕೂಡಿಗೆ ಡಯಟ್ ಪ್ರಾಂಶುಪಾಲ ಜವರೇಗೌಡ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತರಾದ ಜಿಮ್ಮಿ ಸಿಕ್ವೇರ, ಜಿಲ್ಲಾ ಪೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ಎಸ್. ಚೇತನ್, ಆರ್.ಎಫ್.ಓ. ವೈ.ಕೆ. ಜಗದೀಶ್, ಡಿ.ಆರ್.ಎಫ್.ಓ. ಆನಂದ್ ಜಯಗೌಡ, ಗ್ರೀನ್‍ಸಿಟಿ ಫೋರಂ ಸಿ.ಜಿ. ಸತ್ಯ, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಬಿ.ಎಸ್. ಜಯಪ್ಪ, ಶಿಕ್ಷಕÀ ವಿಲ್‍ಫ್ರೇಡ್ ಕ್ರಾಸ್ತ ಮತ್ತಿತರು ಇದ್ದರು.
ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಜಿ.ಆರ್.ಗಣೇಶನ್, ಶಿಕ್ಷಣ ಇಲಾಖೆ ಉಪನಿರ್ದೇಶಕ ಮಚ್ಚಾಡೋ, ಸಂಚಾಲಕ ಟಿ.ಜಿ. ಪ್ರೇಮ್‍ಕುಮಾರ್ ಮಾಹಿತಿ ನೀಡಿದರು.
ಹಸಿರು ದೀಪಾವಳಿ ಆಚರಣೆ ಕುರಿತಂತೆ ಪ್ರತಿಜ್ಞಾವಿಧಿ ಬೋಧಿಸಿದ ನವೀನ್ ಕುಮಾರ್ ಇಂತಹ ಪರಿಸರ ಕಾರ್ಯಕ್ರಮ ಹೆಚ್ಚಾಗಿ ನಡೆಯಬೇಕು. ಶಾಲೆಯ ಮುಖ್ಯ ಶಿಕ್ಷಕ ಜಾನ್ಸನ್ ಇದ್ದರು.