ಮಡಿಕೇರಿ, ಅ.25: ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ನಗರದ ಕೋಟೆಗೆ ಭೇಟಿ ನೀಡಿ ವೀಕ್ಷಿಸಿದರು.
ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಈ ವೇಳೆ ಮಾತನಾಡಿ ರಾಜರ ಕಾಲದ ಕೋಟೆಯನ್ನು ಸಂರಕ್ಷಣೆ ಮಾಡಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಗರದ ಕೋಟೆ ಆವರಣದಲ್ಲಿನ ಕಟ್ಟಡವನ್ನು ಮತ್ತು ಸ್ಮಾರಕವನ್ನು ಭಾರತ ಪುರಾತತ್ವ ಇಲಾಖೆಗೆ ಹಸ್ತಾಂತರಿಸಬೇಕಿದ್ದು, ಆ ನಿಟ್ಟಿನಲ್ಲಿ ಕೋಟೆ ಸಂರಕ್ಷಣೆ ಮಾಡಲು ಕಟ್ಟಡ ಮತ್ತು ಸ್ಮಾರಕವನ್ನು ಸರಿಪಡಿಸಲು ಭಾರತ ಪುರಾತತ್ವ, ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ 8.20 ಕೋಟಿ ರೂ. ಬಿಡುಗಡೆಗೆ ಜಂಟಿ ಅಂದಾಜು ಪಟ್ಟಿ ತಯಾರಿಸಿ ದುರಸ್ತಿ ಕಾರ್ಯ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು. ಜಿ.ಪಂ.ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಇತರರು ಇದ್ದರು.
ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಸ್ಮಾರಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ನಂತರ ಜಂಬೂರಿನಲ್ಲಿ ನಿರ್ಮಾಣವಾಗುತ್ತಿರುವ ಮನೆಗಳನ್ನು ಪರಿವೀಕ್ಷಣೆ ಮಾಡಿದರು. ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಇತರರು ಇದ್ದರು.