ಮಡಿಕೇರಿ, ಅ. 26: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವದು ಸಾಮಾನ್ಯವಾಗಿದ್ದು, ಇದರಿಂದ ಮಾಲಿನ್ಯ ಪ್ರಮಾಣ ಪರಿಗಣಿಸಿ ಪಟಾಕಿ ಮತ್ತು ಸಿಡಿ ಮದ್ದುಗಳನ್ನು ಸುಡುವ ಬಗ್ಗೆ ಕೇಂದ್ರ ಸರ್ಕಾರದ ಪರಿಸರ ಸಚಿವಾಲಯ ಅಧಿಸೂಚನೆ ಜಾರಿಗೊಳಿಸಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದ್ದು, ಉಳಿದ ಅವಧಿಯಲ್ಲಿ ಪಟಾಕಿ ಸಿಡಿಸುವದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.