ಮಡಿಕೇರಿ, ಅ. 26: ಮಡಿಕೇರಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಉದ್ದಿಮೆದಾರರು ನಗರ ವ್ಯಾಪ್ತಿಯಲ್ಲಿ ಕಸ ವಿಂಗಡಣೆ ಬಗ್ಗೆ ತಿಳುವಳಿಕೆ ನೀಡಿದರೂ ಸಹ ಪೂರ್ಣ ಪ್ರಮಾಣದಲ್ಲಿ ಕಸ ವಿಂಗಡಣೆಯಾಗುತ್ತಿಲ್ಲ. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಮನೆ ಮನೆ ಕಸ ಸಂಗ್ರಹಣೆ, ವಿಂಗಡಣೆ ಹಾಗೂ ವಿಲೇವಾರಿ ಬಗ್ಗೆ ಜನಾಂದೋಲನ ಕಾರ್ಯಕ್ರಮ ಕೈಗೊಳ್ಳಲಾಗುವದು. ಆದ್ದರಿಂದ ಸಾರ್ವಜನಿಕರು ಹೊಟೇಲ್ ಮಾಲೀಕರು, ಹೋಂ ಸ್ಟೇ ನಡೆಸುವವರು ಹಾಗೂ ಇತರ ಉದ್ದಿಮೆದಾರರು ಕಸ ಬೇರ್ಪಡಿಸಿ ನಗರಸಭೆಯ ವಾಹನಕ್ಕೆ ನೀಡಿ ನಗರದ ಸ್ವಚ್ಛತೆ ಹಾಗೂ ಸೌಂದರ್ಯವನ್ನು ಕಾಪಾಡುವಂತೆ ಪೌರಾಯುಕ್ತ ರಮೇಶ್ ಕೋರಿದ್ದಾರೆ.