ನಾಪೆÇೀಕ್ಲು, ಅ. 26: ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿರುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಎಲ್ಲಾ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ ಹೇಳಿದರು.

ಬಲ್ಲಮಾವಟಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ನಮ್ಮ ಗ್ರಾಮ ನಮ್ಮ ಯೋಜನೆಯ ವಿಶೇಷ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು. ಸರಕಾರದ ಆದೇಶದಂತೆ ಗ್ರಾಮದಲ್ಲಿ ನಡೆಯಬೇಕಾಗಿರುವ ಕಾಮಗಾರಿ ಗಳಿಗೆ ಈ ಸಭೆಯಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ ಎಂದರು.

ಗ್ರಾಮಸ್ಥರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ನೆರವಂಡ ಉಮೇಶ್, ಮಣವಟ್ಟಿರ ದಯಾ ಕುಟ್ಟಪ್ಪ ಬೀದಿ ದೀಪಗಳು ಇಲ್ಲದಿರುವದು, ಕುಡಿಯುವ ನೀರಿನ ಪೈಪ್ ಅಳವಡಿಕೆ ಮತ್ತಿತರ ವಿಷಯಗಳ ಬಗ್ಗೆ ಪಂಚಾಯಿತಿಯ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ.ಆರ್. ಶ್ರೀಧರ್ ಬೀದಿ ದೀಪ ಮತ್ತು ನೀರಿನ ಪೈಪ್‍ಲೈನ್ ಅಳವಡಿಸಲು ಕ್ರಮ ಕೈಗೊಳ್ಳ ಲಾಗುವದು. ಅದರೊಂದಿಗೆ ಮುಂದಿನ ಹತ್ತು ದಿನಗಳಲ್ಲಿ ಪಂಚಾಯಿತಿಗೆ ಒಳಪಟ್ಟ ಪ್ರಮುಖ ಸ್ಥಳಗಳಲ್ಲಿ ಎಂಟು ಸೋಲಾರ್ ದೀಪ ಅಳವಡಿಸಲಾಗುವದು ಎಂದರು.

ನಮ್ಮ ಗ್ರಾಮದಲ್ಲಿ ಯಾವದೇ ಸಮಸ್ಯೆ ಇಲ್ಲ ಎಂದು ಗ್ರಾಮ ಪಂಚಾಯಿತಿ ತಿಳಿದಿದೆ. ಪೇರೂರು ಗ್ರಾಮ ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ಸೇರಿದ್ದಲ್ಲ. ಕೇರಳ ರಾಜ್ಯಕ್ಕೆ ಸೇರಿದೆ ಎಂದು ಕಡತದಲ್ಲಿ ದಾಖಲಿಸಿ ಎಂದು ಗ್ರಾಮದ ಬೊಟ್ಟೋಳಂಡ ಮಿಟ್ಟು ಪೂಣಚ್ಚ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಧ್ವನಿ ಗೂಡಿಸಿದ ಗ್ರಾಮ ಪಂಚಾಯಿತಿ ಸದಸ್ಯ ಚಂಗೇಟಿರ ಕುಮಾರ್ ಸೋಮಣ್ಣ, ಎಲ್ಲಾ ಗ್ರಾಮಗಳನ್ನು ಪ್ರಕೃತಿ ವಿಕೋಪಕ್ಕೆ ಒಳಗಾದ ಗ್ರಾಮ ಎಂದು ಗುರುತಿಸಲಾಗಿದೆ ಆದರೆ ಅತೀ ಹೆಚ್ಚಿನ ತೊಂದರೆಗೆ ಒಳಗಾದ ಪೇರೂರು ಗ್ರಾಮವನ್ನು ಇದರಿಂದ ಕೈಬಿಡಲಾಗಿದೆ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಪಂಚಾಯಿತಿ ಅಧ್ಯಕ್ಷೆ ಈ ವರ್ಷ ಪೇರೂರು ಗ್ರಾಮದಲ್ಲಿ ಹೆಚ್ಚಿನ ಕಾಮಗಾರಿ ನಡೆಸಲಾಗಿದೆ. ಬಾಕಿಯಿರುವ ಕಾಮಗಾರಿಯನ್ನು ಶೀಘ್ರದಲ್ಲಿಯೇ ನಡೆಸಲಾಗುವದು. ಪೇರೂರು ಗ್ರಾಮವನ್ನು ಕೈಬಿಟ್ಟಿರುವದಕ್ಕೆ ಗ್ರಾಮ ಪಂಚಾಯಿತಿ ಕಾರಣವಲ್ಲ ಈ ಬಗ್ಗೆ ಮಾಹಿತಿ ಪಡೆಯಲಾಗುವದು ಎಂದು ಭರವಸೆ ನೀಡಿದರು.

ವೇದಿಕೆಯಲ್ಲಿ ನೋಡಲ್ ಅಧಿಕಾರಿಯಾಗಿ ಮಡಿಕೇರಿ ಕೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಬದ್ದಂಜೆಟ್ಟಿರ ದೇವಿ ದೇವಯ್ಯ, ಬೈರುಡ ಮುತ್ತಪ್ಪ, ಚಂಗೇಟಿರ ಕುಮಾರ್ ಸೋಮಣ್ಣ, ಪಾಪು, ದರಣಿ, ಸಿಬ್ಬಂದಿ ಇದ್ದರು.