ಸೋಮವಾರಪೇಟೆ, ಅ. 26: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ಗ್ರಾಮಸಭೆ ಹಾಗೂ ಜಮಾಬಂದಿ ಸಭೆ ಅಧ್ಯಕ್ಷೆ ರೇಣುಕಾ ವೆಂಕಟೇಶ್ ಅಧ್ಯಕ್ಷತೆಯಲ್ಲಿ ತಾ. 31 ರಂದು ಪಂಚಾಯಿತಿ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಜಿ. ಪಂ. ಸದಸ್ಯ ಬಿ.ಜೆ. ದೀಪಕ್, ತಾ. ಪಂ. ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೆಚ್.ಎನ್. ತಂಗಮ್ಮ, ನೋಡಲ್ ಅಧಿಕಾರಿಯಾಗಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಪಾಲ್ಗೊಳ್ಳಲಿರುವದಾಗಿ ಪಿಡಿಓ ತಿಳಿಸಿದ್ದಾರೆ.