ಕೂಡಿಗೆ, ಅ. 26: ದೊಡ್ಡಅಳುವಾರ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ವಿಶ್ವ ವನ್ಯಜೀವಿ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವನ್ಯಜೀವಿ ಛಾಯಚಿತ್ರ ಪ್ರದರ್ಶನ ಮತ್ತು ಶಾಲಾ ಮಕ್ಕಳಿಗೆ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕ ಪ್ರೋ.ಎಲ್.ರಂಗನಾಥ್ ಉದ್ಘಾಟಿಸಿ, ಮಾತನಾಡಿದರು. ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಈ ಸಂದರ್ಭ ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಪ್ರಸನ್ನ, ಶಿಕ್ಷಕರಾದ ಪುಷ್ಪ, ಪದ್ಮನಾಭ್, ದಿನೇಶಾಚಾರಿ, ನೀಲಪ್ಪ, ತಾಂತ್ರಿಕ ಸಿಬ್ಬಂದಿ ಪ್ರಸನ್ನ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.