ಸಿದ್ದಾಪುರ, ಅ. 26: ಮದ್ಯ ಸೇವಿಸಿ ಕಾರು ಚಾಲನೆ ಮಾಡುತ್ತಿದ್ದ ಚಾಲಕನಿಗೆ ಹಾಗೂ ಹೆಲ್ಮೆಟ್ ಧರಿಸದೆ ಬೈಕ್ ಹಾಗೂ ಸ್ಕೂಟರ್ ಚಲಾಯಿಸುತ್ತಿದ್ದ ಸವಾರರಿಗೆ ಸಿದ್ದಾಪುರ ಪೊಲೀಸರು ಬಿಸಿ ಮುಟ್ಟಿಸಿ ದಂಡ ವಿಧಿಸಿದ್ದಾರೆ. ಸಿದ್ದಾಪುರದಲ್ಲಿ ಶನಿವಾರದಂದು ಮದ್ಯ ಸೇವಿಸಿ ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯೋರ್ವ ನಿಗೆ ದಂಡವಿಧಿಸಿದ್ದು, ಸಿದ್ದಾಪುರ ಪಟ್ಟಣ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ವನ್ನು ಹೆಲ್ಮೆಟ್ ಧರಿಸದೆ ಚಲಾಯಿಸಿ ಕೊಂಡು ಹೋಗುತ್ತಿದ್ದ ಸವಾರರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ದಯಾನಂದ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.