ಸೋಮವಾರಪೇಟೆ, ಅ. 28: ತಾಲೂಕು ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯ ವತಿಯಿಂದ ತಾ. 31 ರಂದು ಬೆಳಿಗ್ಗೆ 9 ಗಂಟೆಗೆ ಇಲ್ಲಿನ ಸ್ತ್ರೀಶಕ್ತಿ ಭವನದಲ್ಲಿ ಕಲಾಶ್ರೀ ಆಯ್ಕೆ ಶಿಬಿರ ನಡೆಯಲಿದೆ.

ತಾಲೂಕಿನ 9 ವರ್ಷದಿಂದ 14 ವರ್ಷದೊಳಗಿನ ಮಕ್ಕಳಿಗಾಗಿ ಕಲಾಶ್ರೀ ಆಯ್ಕೆ ಶಿಬಿರ ಹಾಗೂ ಗಾಂಧಿ ಜಯಂತಿ ಅಂಗವಾಗಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಕಲಾಶ್ರೀ ಆಯ್ಕೆ ಶಿಬಿರದಲ್ಲಿ ಸೃಜನಾತ್ಮಕ ಕಲೆ, ಬರವಣಿಗೆ, ಪ್ರಬಂಧ, ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕ ಪಾತ್ರಾಭಿನಯ, ಯೋಗ, ನೃತ್ಯ, ಸಂಗೀತ ಸ್ಪರ್ಧೆ ನಡೆಯಲಿದೆ. ಇವುಗಳಲ್ಲಿ ಓರ್ವ ವಿದ್ಯಾರ್ಥಿಗೆ ಒಂದು ಕಲೆ ಮಾತ್ರ ಪ್ರದರ್ಶಿಸಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08276 282281ನ್ನು ಸಂಪರ್ಕಿಸಬಹುದು.

ಪೊನ್ನಂಪೇಟೆ: ವೀರಾಜಪೇಟೆ ತಾಲೂಕು ಬಾಲಭವನ ವತಿಯಿಂದ ತಾಲೂಕು ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮ ತಾ. 31 ರಂದು ಪೊನ್ನಂಪೇಟೆಯ ತಾಲೂಕು ಸ್ತ್ರೀಶಕ್ತಿ ಭವನದಲ್ಲಿ ನಡೆಯಲಿದೆ. ಶಿಬಿರದಲ್ಲಿ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಈ ನಾಲ್ಕು ಚಟುವಟಿಕೆಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. 9 ರಿಂದ 16 ವರ್ಷದ ಒಳಗಿನ ಸ್ಪರ್ದೆಯಲ್ಲಿ ಭಾಗವಹಿಸಲು ಇಚ್ಚಿಸುವ ಮಕ್ಕಳು ತಾ. 31 ರಂದು ಬೆಳಿಗ್ಗೆ 9 ಗಂಟೆಗೆ ತಾಲೂಕು ಸ್ತ್ರೀಶಕ್ತಿ ಭವನ ಪೊನ್ನಂಪೇಟೆಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಈಗಾಗಲೇ ಕಲಾಶ್ರೀ ಪ್ರಶಸ್ತಿಗೆ ಭಾಜನರಾದವರು ಮತ್ತೆ ಭಾಗವಹಿಸುವಂತಿಲ್ಲ ಎಂದು ವೀರಾಜಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.