ನಾಪೆÇೀಕ್ಲು, ಅ. 28: ನಿರಂತರ ವಿದ್ಯುತ್ ಸಮಸ್ಯೆಯಿಂದ ಸಣ್ಣ ಪುಟ್ಟ ಕೈಗಾರಿಕೆಗಳು ಮತ್ತು ಮಿಲ್ಲುಗಳು ಕೆಲಸವಿಲ್ಲದೆ ಪರಿತಪಿಸುವಂತಾಗಿದೆ. ಸಮಸ್ಯೆ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ, ಮೊಬೈಲ್ ಮುಖಾಂತರ ಮಾತನಾಡಲು ಪ್ರಯತ್ನಿಸಿದರೆ ವ್ಯಾಪ್ತಿ ಪ್ರದೇಶದ ಹೊರಗಿದ್ದಾರೆ ಎಂಬ ಉತ್ತರ ದೊರಕುತ್ತದೆ ಎಂದು ಆರೋಪಿಸಿರುವ ಸಾರ್ವಜನಿಕರು, ವಿದ್ಯುತ್ ಕಣ್ಣಾಮುಚ್ಚಾಲೆ ಸಮಸ್ಯೆಯನ್ನು ಪರಿಹರಿಸದಿದ್ದರೆ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದ್ದಾರೆ.