ಸೋಮವಾರಪೇಟೆ, ಅ. 28: ತಾಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಸಮೀಪದಲ್ಲಿಯೇ ಕಲ್ಲು ಗಣಿಗಾರಿಕೆ ನಡೆಸಲು ಹುನ್ನಾರ ನಡೆಯುತ್ತಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪದ್ಮಾವತಿ ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳ ಹಿಂದೆ, ಈ ಭಾಗದಲ್ಲಿ ಕಲ್ಲುಗಣಿಗಾರಿಕೆಯನ್ನು ನಿಷೇಧಿಸಲಾಗಿತ್ತು. ಇದೀಗ ಶಾಲೆಯ ಅನತಿ ದೂರದಲ್ಲಿಯೇ ಗಣಿಗಾರಿಕೆ ಯನ್ನು ಮತ್ತೆ ಪ್ರಾರಂಭಿಸಲು ಮುಂದಾಗಿರುವದು ಖಂಡನೀಯ ಎಂದರು. ಈ ಹಿಂದೆ ಗಣಿಗಾರಿಕೆ ನಡೆಸುತ್ತಿದ್ದ ಸಂದರ್ಭ ಶಾಲಾ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ. ಮತ್ತೊಮ್ಮೆ ಪ್ರಾರಂಭಿಸಿದರೆ, ಶಾಲೆಯ ಗೋಡೆಗಳು ಬೀಳುವ ಸಂಭವವಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿ ಗಳಿಗೆ ಪಾಠ ಪ್ರವಚನ ಗಳನ್ನು ನಡೆಸಲು ತೊಂದರೆಯಾಗು ತ್ತದೆ. ಅಲ್ಲದೆ, ಭಾನುವಾರ ಶಿಕ್ಷಕರು ವಿಶೇಷ ತರಗತಿಗಳನ್ನು ತೆಗೆದು ಕೊಳ್ಳುತ್ತಿರುವದರಿಂದ ಅವರಿಗೂ ತೊಂದರೆಯಾಗುತ್ತದೆ ಎಂದು ಅಳಲು ತೋಡಿಕೊಂಡರು. ಗ್ರಾಮಸ್ಥರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಹಕಾರದಿಂದ ಶಾಲೆ ಉತ್ತಮವಾಗಿ ನಡೆಯುತ್ತಿದೆ. ಇದೀಗ ಕಲ್ಲುಗಣಿಗಾರಿಕೆಯಿಂದ ತೊಂದರೆ ಯನ್ನು ಅನುಭವಿಸಬೇಕಾಗಿದೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಗಳಿಗೂ ಪುಕಾರು ನೀಡಲಾಗಿದೆ ಎಂದರು. ಶಾಲೆಯ ಸಮೀಪ ಕಲ್ಲು ಗಣಿಗಾರಿಕೆಯನ್ನು ಪ್ರಾರಂಭಿಸಲು ಮುಂದಾದರೆ, ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆಯನ್ನು ಎದುರಿಸಬೇಕಾಗು ತ್ತದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಕೆ. ಲೋಕಾನಂದ ಎಚ್ಚರಿಸಿದರು. ಗೋಷ್ಠಿಯಲ್ಲಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಂದ್ರ, ಪದಾಧಿಕಾರಿ ಗಳಾದ ಯಶೋಧ, ಅಲ್ಪೋನ್ಸ್ ಲೋಭೋ, ರವಿಕುಮಾರ್ ಉಪಸ್ಥಿತರಿದ್ದರು.