ನಾಪೆÇೀಕ್ಲು, ಅ. 28: ಸರಕಾರ ಗ್ರಾಮ ಪಂಚಾಯಿತಿ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಂಸ್ಥೆಯ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಸಲಹೆ ನೀಡಿದರು.
ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಗ್ರಾಮ ಸಭೆಯಲ್ಲಿ ಅವರು ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಸರಕಾರ ನೀಡುವ ಅನುದಾನದಲ್ಲಿ ಸೋರಿಕೆಯಾಗ ಬಾರದು ಎಂಬ ನಿಟ್ಟಿನಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡ ಲಾಗುತ್ತಿದೆ. ಅದರೊಂದಿಗೆ ವಿವಿಧ ಇಲಾಖೆಗಳ ಮೂಲಕ ಗ್ರಾಮೀಣ ಜನರು ಸುಭದ್ರ ಬದುಕು ಕಟ್ಟಿಸಿ ಕೊಳ್ಳಲು ಹಲವಾರು ಯೋಜನೆ ಗಳನ್ನು ಜಾರಿಗೊಳಿಸಲಾಗಿದೆ. ಅರ್ಹ ಫಲಾನುಭವಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದರು.
ಮಡಿಕೇರಿ ತಾ. ಪಂ. ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ ಮಾತನಾಡಿ, ಹೆಚ್ಚಿನ ಮಳೆಯ ಕಾರಣದಿಂದ ಪಂಚಾಯಿತಿಗೆ ಒಳಪಟ್ಟ ಹಲವು ರಸ್ತೆಗಳು ಹಾಳಾಗಿದ್ದು ಮುಂದಿನ ದಿನಗಳಲ್ಲಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವದು ಎಂದರು.
ರಸ್ತೆ, ಸ್ವಚ್ಛತೆ ಮತ್ತಿತರ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಾದ ಪಾಂಡಂಡ ನರೇಶ್, ಬಡಕಡ ಸುರೇಶ್ ಬೆಳ್ಯಪ್ಪ, ಕುಡಿಯರ ಮುತ್ತಪ್ಪ ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ಗ್ರಾಮಸ್ಥರಿಗೆ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ ವಹಿಸಿದ್ದರು. ವೇದಿಕೆಯಲ್ಲಿ ನೋಡಲ್ ಅಧಿಕಾರಿ ಕವಿತಾ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಯಕೋಲ್ ಉಸ್ಮಾನ್, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಚಿನ್ ಹಾಗೂ ಸಿಬ್ಬಂದಿಗಳು ಇದ್ದರು.