ಮಡಿಕೇರಿ, ಅ. 28: ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಪ್ರಯುಕ್ತ ಮಕ್ಕಳಿಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳ ಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ರಾಧ ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಮಕ್ಕಳಿಗೆ ಮಹಾತ್ಮ ಗಾಂಧೀಜಿಯವರ ಆದರ್ಶಗಳ ಬಗ್ಗೆ ತಿಳಿಸಿದರು. ಪಂಚಾಕ್ಷರಿ ಭಜನಾ ಮಂಡಳಿ, ಸಂಪಾಜೆಯ ಮಹಿಳೆಯರಿಂದ ಮಕ್ಕಳಿಗೆ ಭಜನೆಯನ್ನು ಹೇಳಿ ಕೊಡಲಾಯಿತು. ಸರ್ಕಾರಿ ಬಾಲಕರ ಬಾಲಮಂದಿರ ಮಕ್ಕಳು ಮಹಾತ್ಮ ಗಾಂಧೀಜಿಯವರ ಕುರಿತು ವೇಷಭೂಷಣ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅರುಂಧತಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭ, ಚಿತ್ರಕಲಾ ಶಿಕ್ಷಕ ಭರತ್ ಕೋಡಿ, ಬಾಲಕಿಯರ ಬಾಲ ಮಂದಿರದ ಸಿಬ್ಬಂದಿಗಳು, ಬಾಲಕರ ಬಾಲಮಂದಿರದ ಸಿಬ್ಬಂದಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು. ಎಲ್ಲಾ ಮಕ್ಕಳಿಗೆ ಪ್ರಶಂಸನಾ ಪತ್ರ ನೀಡಲಾಯಿತು.