ಮಡಿಕೇರಿ, ಅ. 28: ನೆಹರೂ ಯುವ ಕೇಂದ್ರ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯ ಅರ್ಥಶಾಸ್ತ್ರ ವಿಭಾಗದ ಪ್ರೊ. ಅಮಥ್ರ್ಯ ಸೇನ್ ವೇದಿಕೆಯ ವತಿಯಿಂದ ಕಾಲೇಜು ಆವರಣದಲ್ಲಿ “ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು” ಎಂಬ ವಿಷಯದ ಬಗ್ಗೆ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲೆ ಪ್ರೊ. ಚಿತ್ರಾ ವೈ ಉದ್ಘಾಟಿಸಿದರು. ನೆಹರು ಯುವ ಕೇಂದ್ರದ ಮಹೇಶ್ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು ಎಂಬ ವಿಷಯದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದಯಾನಂದ, ಆಂಗ್ಲ ವಿಭಾಗದ ಉಪನ್ಯಾಸಕಿ ತೃಪ್ತಿ ಮತ್ತು ಹಿಂದಿ ವಿಭಾಗದ ಉಪನ್ಯಾಸಕಿ ಖುರ್ಷಿದ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳ ಸ್ಪರ್ಧಿಗಳು ಭಾಗವಹಿಸಿದ್ದರು. ಶಿವು ಪ್ರಾರ್ಥಿಸಿದರು.