ಕುಶಾಲನಗರ, ಅ. 28: ಪೊಲೀಸ್ ಹುತಾತ್ಮರ ದಿನಾಚರಣೆ ಪ್ರಯುಕ್ತ ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಶಾಲೆಗಳಲ್ಲಿ ಬೈಲುಕೊಪ್ಪ ಠಾಣಾ ವತಿಯಿಂದ ಮಕ್ಕಳಿಗೆ ಪ್ರಬಂಧ ಬರೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಥಳೀಯ ಭಾರತ್ಮಾತಾ ಶಾಲೆ, ಬೈಲುಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರಬಂಧ ಸ್ಪರ್ಧೆ ನಡೆಯಿತು.
ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಬೈಲುಕೊಪ್ಪ ಪೊಲೀಸ್ ಠಾಣಾಧಿಕಾರಿ ಸವಿ, ಭಾರತಮಾತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ. ಜೋಸೆಫ್, ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ವೃಂದದವರು ಇದ್ದರು.