ಸೋಮವಾರಪೇಟೆ, ಅ. 29: ರೋಟರಿ ಸೋಮವಾರಪೇಟೆ ಹಿಲ್ಸ್ ವತಿಯಿಂದ ಸ್ವಚ್ಛ ಭಾರತ್ ಅಂಗವಾಗಿ ತಾಲೂಕಿನ 22 ಶಾಲೆಗಳಿಗೆ ಡಸ್ಟ್‍ಬಿನ್‍ಗಳನ್ನು ವಿತರಿಸಲಾಯಿತು.
ಚೌಡ್ಲು ಗ್ರಾಮದ ಸಾಂದೀಪನಿ ಆಂಗ್ಲಮಾಧ್ಯಮ ಶಾಲೆಯಲ್ಲಿ ಡಸ್ಟ್‍ಬಿನ್‍ಗಳನ್ನು ವಿತರಿಸಿ ಮಾತನಾಡಿದ ರೋಟರಿ ಅಧ್ಯಕ್ಷ ಡಿ.ಪಿ.ರಮೇಶ್, ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಲ್ಲ ಪ್ರದೇಶಗಳಲ್ಲೂ ತ್ಯಾಜ್ಯ ವಿಲೇವಾರಿ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಂದರ್ಭವಿದೆ. ವಿದ್ಯಾರ್ಥಿಗಳು ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಈ ಸಂದರ್ಭ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ, ರೋಟರಿ ಕಾರ್ಯದರ್ಶಿ ಎಚ್.ಸಿ. ಲೋಕೇಶ್, ಶಾಲಾ ಮುಖ್ಯ ಶಿಕ್ಷಕ ಮಾರ್ಷಲ್ ಲೋಬೋ ಮತ್ತಿತರರು ಇದ್ದರು.