ಮಡಿಕೇರಿ, ಅ. 29: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ತಾ. 30 ರಂದು (ಇಂದು) ಬೆಳಗ್ಗೆ 10.30 ಗಂಟೆಗೆ ಮ್ಯಾನ್ಸ್ ಕಾಂಪೌಂಡ್‍ನ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ 2019-20ನೇ ಸಾಲಿನ ವಾರ್ಷಿಕ ಮಹಾಸಭೆಯು ಜಿಲ್ಲಾಧಿಕಾರಿಗಳು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಬಿ .ಕಾಳಪ್ಪ ತಿಳಿಸಿದ್ದಾರೆ.