ಸೋಮವಾರಪೇಟೆ, ಅ. 30: ಎರಡು ದಿನಗಳಿಂದ ಶಾಲೆಗೆ ರಜೆ ಹಾಕಿದ್ದ 7ನೇ ತರಗತಿ ವಿದ್ಯಾರ್ಥಿನಿಯೋರ್ವಳು, ಇಂದು ತರಗತಿಗೆ ತೆರಳಲು ಹೆದರಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಸಮೀಪದ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮ ನಿವಾಸಿ ಮಂಜುನಾಥ್ ಮತ್ತು ಸವಿತ ದಂಪತಿ ಪುತ್ರಿ, ಯಡವಾರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮೇಘನ (13) ಎಂಬಾಕೆಯೇ ನೇಣಿಗೆ ಶರಣಾದವಳು.

ಪೋಷಕರು ಕೆಲಸಕ್ಕೆ ತೆರಳಿದ್ದರೆ, ಸಹೋದರ ಶಾಲೆಗೆ ತೆರಳಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ಮನೆಯ ಛಾವಣಿಯ ಬಿಟ್ಟಕ್ಕೆ ತಾಯಿಯ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ.

ಸ್ಥಳಕ್ಕೆ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಮತ್ತು ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.