ವೀರಾಜಪೇಟೆ ತಾಲೂಕು ಬಾಲಭವನ ವತಿಯಿಂದ ತಾಲ್ಲೂಕು ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮವು ಪೊನ್ನಂಪೇಟೆಯ ತಾಲೂಕು ಸ್ತ್ರೀಶಕ್ತಿ ಭವನದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸೃಜನಾತ್ಮಕ ಕಲೆ, ಬರವಣಿಗೆ, ಪ್ರದರ್ಶನ ಕಲೆ, ವಿಜ್ಞಾನದಲ್ಲಿ ನೂತನ ಆವಿಷ್ಕಾರ ಈ ನಾಲ್ಕು ಚಟುವಟಿಕೆಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. 9 ರಿಂದ 16 ವರ್ಷದ ಒಳಗಿನ ಸ್ಪರ್ದೆಯಲ್ಲಿ ಭಾಗವಹಿಸಲು ಇಚ್ಚಿಸುವ ಮಕ್ಕಳು ಬೆಳಗ್ಗೆ 9 ಗಂಟೆಗೆ ತಾಲೂಕು ಸ್ರೀಶಕ್ತಿ ಭವನ ಪೊನ್ನಂಪೇಟೆಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಈಗಾಗಲೆ ಕಲಾಶ್ರೀ ಪ್ರಶಸ್ತಿಗೆ ಭಾಜನರಾದವರು ಮತ್ತೆ ಭಾಗವಹಿಸುವಂತಿಲ್ಲ ಎಂದು ವಿರಾಜಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.

* ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮವುಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ.