ಮಡಿಕೇರಿ, ಅ. 30: ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಆಶ್ರಯದಲ್ಲಿ ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಶ್ರದ್ಧಾಂಜಲಿ ಹಾಗೂ ಸ್ಮರಣೆ ಕಾರ್ಯಕ್ರಮ ತಾ. 31ರಂದು (ಇಂದು) ನಡೆಯಲಿದೆ.ಬೆಳಿಗ್ಗೆ 9.30 ಗಂಟೆಗೆ ಸುದರ್ಶನ ವೃತ್ತದ ಬಳಿ ಅಪ್ಪಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಬಳಿಕ ಕೋಟೆ ಆವರಣದವರೆಗೆ ಮೌನ ಮೆರವಣಿಗೆ ನಡೆಯಲಿದೆ. 10 ಗಂಟೆಗೆ ಇಂದು ಅಪ್ಪಯ್ಯ ಗೌಡರ ಸ್ಮರಣೆ(ಮೊದಲ ಪುಟದಿಂದ) ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಶಾಸಕ ಕೆ.ಜಿ. ಬೋಪಯ್ಯ, ವಿಧಾನಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪಣ್ಣೇಕರ್ ಉಪಸ್ಥಿತರಿರುವರು. ಮುಖ್ಯ ಭಾಷಣಕಾರರಾಗಿ ವಕೀಲ ಕೆ.ಆರ್. ವಿದ್ಯಾಧರ್ ಭಾಗವಹಿಸುವರು.