ಕೂಡಿಗೆ, ಅ. 30: ಇಲ್ಲಿಗೆ ಸಮೀಪದ ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ. ದೇವರಾಜು ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಪ್ರಾಥಮಿಕ ಶಾಲಾ ಆವರಣದ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಕೃಷಿ, ತೋಟಗಾರಿಕೆ, ಕಂದಾಯ, ಅರಣ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ದಾಕ್ಷಾಯಿಣಿ, ಅಭಿವೃದ್ಧಿ ಅಧಿಕಾರಿ ಎಂ.ಆರ್. ಸಂತೋಷ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಈಶ್ವರ, ಮಹೇಶಕುಮಾರ್ ಸೇರಿದಂತೆ ಸದಸ್ಯರು ಹಾಜರಿದ್ದರು.