ಮಡಿಕೇರಿ, ಅ.30 : ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಸದಸ್ಯತ್ವ ಅಭಿಯಾನ ನ.1 ರಿಂದ 30ರವರೆಗೆ ದೇಶಾದ್ಯಂತ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಸದಸ್ಯರುಗಳ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಟಿ.ಹೆಚ್.ಅಬೂಬಕ್ಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಪೂರಕವಾಗಿ ‘ಘನತೆಯ ರಾಜಕೀಯಕ್ಕಾಗಿ ಎಸ್ಡಿಪಿಐ ಸೇರಿರಿ’ ಎನ್ನುವ ಘೋಷವಾಕ್ಯವನ್ನು ಒಳಗೊಂಡ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಅಭಿಯಾನದ ಭಾಗವಾಗಿ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 5 ಸಾವಿರ ಸದಸ್ಯರನ್ನು ನೋಂದಣಿ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ. ಅದರಂತೆ ರಾಜ್ಯವ್ಯಾಪಿ 1 ಲಕ್ಷಕ್ಕೂ ಹೆಚ್ಚಿನ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಉದ್ದೇಶವಿದೆ ಎಂದು ಟಿ.ಹೆಚ್.ಅಬೂಬಕ್ಕರ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯ ಅಮಿನ್ ಮೊಹಿಸಿನ್. ಜಿಲ್ಲಾ ಉಪಾಧ್ಯಕ್ಷ ಕೆ.ಜಿ.ಪೀಟರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ಕಾರ್ಯದರ್ಶಿ ಕಬೀರ್, ನಗರಾಧ್ಯಕ್ಷ ಹಾಗೂ ಮನ್ಸೂರ್ ಉಪಸ್ಥಿತರಿದ್ದರು.