ಸುಂಟಿಕೊಪ್ಪ, ಅ. 30: ಶ್ರೀನಾರಾಯಣ ಗುರು ಬಿಲ್ಲವ ಸೇವಾ ಸಂಘದ ಸುಂಟಿಕೊಪ್ಪ ಹೋಬಳಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 105ನೇ ಜಯಂತ್ಯೋತ್ಸವ ಹಾಗೂ ದೇಯಿಬೈದೇದಿ ಬಿಲ್ಲವ ಮಹಿಳಾ ಸಂಘದ 8ನೇ ವಾರ್ಷಿಕೋತ್ಸವ, ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನ. 1 ರಂದು ಶ್ರೀ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.ಬೆಳಿಗ್ಗೆ 7 ಗಂಟೆಗೆ ಗಣಹೋಮ,8 ಗಂಟೆಗೆ ಶ್ರೀನಾರಾಯಣ ಗುರುಗಳ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಶ್ರೀಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಿಂದ ಶ್ರೀ ನಾರಾಯಣ ಗುರು ಮತ್ತು ಕೋಟಿ ಚೆನ್ನಯ್ಯ ಭಾವಚಿತ್ರವನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಯಲಿದೆ.ಸಭಾ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಶ್ರೀ ನಾರಾಯಣ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಮುಖೇಶ್ರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಉದ್ಘಾಟನೆಯನ್ನು ಭಾರತೀಯ ವೈದ್ಯಕೀಯ ಮಂಡಳಿ ಸದಸ್ಯ ಡಾ. ಯಶೋಧರ ಪೂಜಾರಿ ನೆರವೇರಿಸಲಿದ್ದಾರೆ.ದಿಕ್ಸೂಚಿ ಭಾಷಣವನ್ನು ಮಂಗಳೂರು ಯುವ ವಾಹಿನಿ ಅಧ್ಯಕ್ಷ ನರೇಶ್ಕುಮಾರ್ ಸಸಿಹಿತ್ಲು ಮಾಡಲಿದ್ದಾರೆ. ಉಪನ್ಯಾಸವನ್ನು ಖ್ಯಾತ ನಿರೂಪಕ ನಿತಿಶ್ಕುಮಾರ್ ನೀಡಲಿದ್ದಾರೆ.