*ಗೋಣಿಕೊಪ್ಪಲು, ಅ. 30: ಭರತನಾಟ್ಯ ಹಾಗೂ ಆಶುಭಾಷಣ ಸ್ಪರ್ಧೆಯಲ್ಲಿ ನಾಟ್ಯಾಂಜಲಿ ನೃತ್ಯ ಶಾಲೆಯ ವಿದ್ಯಾರ್ಥಿನಿ ಕಾವ್ಯಶ್ರೀ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸೋಮವಾರಪೇಟೆ ಕೊಡವ ಸಮಾಜದಲ್ಲಿ ನಡೆದ ಯುವಜನೋತ್ಸವದಲ್ಲಿ ಕಾವ್ಯಶ್ರೀ ಅವರು ಭರತನಾಟ್ಯ ಮತ್ತು ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡರು. ಕಾವ್ಯಶ್ರೀ ಅಮ್ಮತ್ತಿ ಬಿಳುಗುಂದ ಗ್ರಾಮದ ನಿವಾಸಿ ಎಂ. ಪಿ. ಕಾಂತ್ರಾಜ್ ಹಾಗೂ ಹೇಮಾವತಿ ಕಾಂತ್ರಾಜ್ ದಂಪತಿಯ ಪುತ್ರಿಯಾಗಿದ್ದಾಳೆ.