ಕೂಡಿಗೆ, ಅ. 30: ಹೃದಯವಂತಿಕೆಯೇ ನಮ್ಮ ಸಂಸ್ಕøತಿಯ ಜೀವಾಳ. ಇಂತಹ ಸಂಸ್ಕøತಿಯ ವಿಕಾಸದಲ್ಲಿ ಮನುಷ್ಯ ಹಲವಾರು ಬದಲಾವಣೆಗಳನ್ನು ಕಂಡುಕೊಂಡಿದ್ದಾನೆ. ಸಂಸ್ಕøತಿ ಇರುವದೇ ಕಲಾತ್ಮಕತೆಯಲ್ಲಿ. ಇಂದಿನ ಆಧುನಿಕ ನಾಗರಿಕ ಸಂಸ್ಕøತಿಯು ನಮ್ಮ ಮೂಲ ಕಲಾತ್ಮಕತೆಯ ಸಂಸ್ಕøತಿಯನ್ನು ನಾಶಮಾಡುತ್ತಿದೆ ಎಂದು ಜಾನಪದ ವಿದ್ವಾಂಸ ಮತ್ತು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಪಿ.ಕೆ. ರಾಜಶೇಖರ ವಿಷಾದ ವ್ಯಕ್ತಪಡಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ, ಚಿಕ್ಕಅಳುವಾರಲ್ಲಿ ನಡೆದ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪ್ರದರ್ಶನ-2019 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಅಂಕ ಪಡೆದುಕೊಳ್ಳುವದಷ್ಟೇಯಲ್ಲ, ತಮ್ಮಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಅನಾವರಣ ಮಾಡಿಕೊಳ್ಳುವ ವೇದಿಕೆಯನ್ನು ಸೃಷ್ಟಿ ಮಾಡಿಕೊಳ್ಳಬೇಕು ಎಂದರು.

ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಪ್ರಬಾರ ನಿರ್ದೇಶಕಿ ಪ್ರೊ. ಮಂಜುಳಾ ಶಾಂತರಾಮ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಸಾಂಸ್ಕøತಿಕ ಮತ್ತು ಶೈಕ್ಷಣಿಕ ಪ್ರತಿಭೆಗಳನ್ನು ಗೌಣವಾಗಲು ಬಿಡಬಾರದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎ.ಎಂ. ಖಾನ್ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಕೆ.ಕೆ. ಧರ್ಮಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿ ಪರಿಷತ್ತಿನ ನೂತನ ಅಧ್ಯಕ್ಷ ರಂಜನ್ ಮೋಹನ್, ಉಪಾಧ್ಯಕ್ಷ ಆಕರ್ಷ್, ಕಾರ್ಯದರ್ಶಿ ಗಾನಶ್ರೀ, ಸಾಂಸ್ಕøತಿಕ ಕಾರ್ಯದರ್ಶಿ ಪೌರ್ಣಮಿ, ಕ್ರೀಡಾ ಕಾರ್ಯದರ್ಶಿ ಕೃಪಾ ಮತ್ತು ಅಭಿಲಾಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.