ಕೂಡಿಗೆ, ಅ. 30: ಕೂಡಿಗೆ ಮತ್ತು ಗೋಣಿಮರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ, ಹಾರಂಗಿ ಮುಖ್ಯನಾಲೆಗೆ ಅಡ್ಡಲಾಗಿ ನೂತನ ಸೇತುವೆ ಕಾಮಗಾರಿ ಹಾಗೂ ರಸ್ತೆ ಕಾಂಕ್ರಿಟೀಕರಣ ಸೇರಿದಂತೆ ಒಟ್ಟು ರೂ. 300 ಕೋಟಿ ವೆಚ್ಚದ ಬೃಹತ್ ಕಾಮಗಾರಿಗೆ ಹಾರಂಗಿ ನೀರಾವರಿ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಪ್ರತಿಕ್ರಿಯೆ ನೀಡಿದ್ದು, ಕಳೆದ ಐದು ವರ್ಷಗಳಿಂದ ಒಂದಲ್ಲ ಒಂದು ರೀತಿಯಲ್ಲಿ ದುರಸ್ತಿಪಡಿಸಿದರೂ ರಸ್ತೆಯು ತನ್ನ ಸಾಮಥ್ರ್ಯವನ್ನು ಕಳೆದುಕೊಂಡಿದೆ. ಆದ್ದರಿಂದ ಹೆಚ್ಚಿನ ಹಣವನ್ನು ರಸ್ತೆ ಹಾಗೂ ಸೇತುವೆ ಕಾಮಗಾರಿಗೆ ಕಾಯ್ದಿರಿಸಿ ಶೀಘ್ರದಲ್ಲೇ ಕಾಮಗಾರಿಯನ್ನು ನಡೆಸಲು ಕ್ರಮ ಕೈಗೊಳ್ಳಲು ಸರ್ಕಾರ ಈ ಪ್ರಸ್ತಾವನೆಗೆ ಅನುಮೋದನೆ ನೀಡಬೇಕೆಂದು ಒತ್ತಾಯ ಮಾಡಲಾಗುವದು. ನೀರಾವರಿ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸಲಾಗಿದ್ದು, ಮುಂದಿನ ಬಜೆಟ್‍ನಲ್ಲಿ ಅನುಮೋದನೆ ಪಡೆದು ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ.