ಮಡಿಕೇರಿ, ಅ. 30: ನಗರದ ಶ್ರೀ ವಿಜಯ ವಿನಾಯಕ ದೇವಾಲಯದ 21ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಧ್ಯಾಹ್ನ ಮಹಾಪೂಜೆಯ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಶಾಲಾ ಮಕ್ಕಳು, ನೌಕರರು, ಪೊಲೀಸರು ಸೇರಿದಂತೆ ಸಾರ್ವಜನಿಕರು ಸರದಿಯಲ್ಲಿ ನಿಂತು ಅನ್ನ ಪ್ರಸಾದ ಸ್ವೀಕರಿಸಿ ವಿನಾಯಕನ ಕೃಪೆಗೆ ಪಾತ್ರರಾದರು. ದೇವಾಲಯ ಆಡಳಿತ ಮಂಡಳಿ ಪ್ರಮುಖರು, ಭಕ್ತರ ಸಮ್ಮುಖದಲ್ಲಿ ಸನ್ನಿಧಿಯ ಪ್ರಧಾನ ಅರ್ಚಕರಾದ ಶ್ರೀಕೃಷ್ಣ ಉಪಾಧ್ಯ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು.