ಮಡಿಕೇರಿ, ಅ. 31: ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವವು ತಾ.1 ರಂದು (ಇಂದು) ಬೆಳಗ್ಗೆ 9 ಗಂಟೆಗೆ ಮಳೆ ಹಿನ್ನೆಲೆಯಲ್ಲಿ ಜ.ತಿಮ್ಮಯ್ಯ ಕ್ರೀಡಾಂಗಣ ಕೆಸರುಮಯವಾಗಿರುವದರಿಂದ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ಕೋಟೆ ಆವರಣದಲ್ಲಿ ಪೂರ್ವ ಸಿದ್ಧತೆ ಕಂಡುಬಂತು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕೆÀ್ಷ ಲೋಕೇಶ್ವರಿ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ. ಸಂಜೆ 4.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.