ಮಡಿಕೇರಿ, ಅ. 31: ಮೈಸೂರಿನ ಶರಣು ವಿಶ್ವಮಾನವ ಫೌಂಡೇಷನ್ ವತಿಯಿಂದ ಶಿಕ್ಷಣ ಸಾಹಿತ್ಯ ಹಾಗೂ ಸಾಂಸ್ಕøತಿಕ ಕ್ಷೇತ್ರಗಳಲ್ಲಿನ ಸಾಧನೆಗಾಗಿ ಉಪನ್ಯಾಸಕಿ ಕೆ. ಜಯಲಕ್ಷ್ಮಿಅವರಿಗೆ ಚಿನ್ಮಯ ಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಬೇಲಿಮಠದ ಶ್ರೀ ಶಿವರುದ್ರಮಹಾ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿದರು.

ಜಯಲಕ್ಷ್ಮಿಅವರು ಸಂತ ಜೋಸೆಫರ ಪ.ಪೂ. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಮರ್ಥ ಕನ್ನಡಿಗ ಸಂಸ್ಥೆಯ ಜಿಲ್ಲಾ ಸಂಚಾಲಕಿಯಾಗಿದ್ದಾರೆ. ಜಿಲ್ಲಾ ಜಾನಪದ ಪರಿಷತ್‍ನ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.