ಮಡಿಕೇರಿ, ಅ. 31: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದ ರೈತ ವಿರೋಧಿಯಾಗಿದ್ದು, ಈ ಒಪ್ಪಂದಕ್ಕೆ ಕೇಂದ್ರ ಸರಕಾರ ಸಹಿ ಹಾಕಬಾರದೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಉಳುವ ಯೋಗಿ ಹಸಿರು ಸೇನೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.