ಸೋಮವಾರಪೇಟೆ, ಅ. 31: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ನಿಲುವಾಗಿಲು-ಬೆಸೂರಿನ ಶ್ರೀಬಾಲತ್ರಿಪುರ ಸುಂದರಿ ಅಮ್ಮನವರ ದೇವಾಲಯ ಸಮಿತಿ ಆಶ್ರಯದಲ್ಲಿ ನ. 3 ರಂದು, ದೇವಾಲಯದ ಸಭಾಂಗಣದಲ್ಲಿ ‘ಶರಣ ಸಂಗಮ-ಸಂಸ್ಕøತಿ ದರ್ಶನ’ ವಿಚಾರಗೋಷ್ಠಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಪರಿಷತ್‍ನ ಜಿಲ್ಲಾ ಅಧ್ಯಕ್ಷ ಎಸ್.ಮಹೇಶ್ ತಿಳಿಸಿದ್ದಾರೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗಸ್ವಾಮೀಜಿ ವಹಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ತನ ಸಲಹೆಗಾರರಾದ ಗೊ.ರು. ಚನ್ನಬಸಪ್ಪ ಉದ್ಘಾಟಿಸಲಿದ್ದು, ಪರಿಷತ್‍ನ ರಾಜ್ಯಾಧ್ಯಕ್ಷ ಅಪ್ಪರಾವ್ ಅಕ್ಕೋಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧ್ಯಕ್ಷ ಎಸ್. ಮಹೇಶ್ ಆಶಯ ನುಡಿಗಳಾನ್ನಾಡಲಿದ್ದಾರೆ.

2ನೇ ಗೋಷ್ಠಿಯಲ್ಲಿ ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಡಿ.ಬಿ. ಸೋಮಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ‘ಶರಣರ ಜೀವನ ತತ್ವ ಆದರ್ಶಗಳು’ ವಿಷಯದ ಬಗ್ಗೆ ನಿವೃತ್ತ ಪ್ರಾಧ್ಯಾಪಕ ಸಿ.ಎಂ.ಧರ್ಮಪ್ಪ, ‘ಸದೃಢ ಹಾಗೂ ಸಮಾನತೆಯ ರಾಷ್ಟ್ರ ನಿರ್ಮಾಣದಲ್ಲಿ ವಚನ ಸಾಹಿತ್ಯ’ ವಿಷಯದ ಬಗ್ಗೆ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ ಅಧ್ಯಾಪಕ ಕೆ.ಪಿ. ಜಯಕುಮಾರ್ ವಿಚಾರ ಮಂಡಿಸಲಿದ್ದಾರೆ. ಸಮಾರೋಪ ಹಾಗೂ ಸನ್ಮಾನ ಸಮಾರಂಭದ ಸಾನ್ನಿಧ್ಯವನ್ನು ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ವಹಿಸಲಿದ್ದಾರೆ. ಪರಿಷತ್‍ನ ಜಿಲ್ಲಾಧ್ಯಕ್ಷ ಎಸ್. ಮಹೇಶ್ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸಾಹಿತಿ ಮೋಹನ್ ಪಾಳೇಗಾರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಿಕಟಪೂರ್ವ ಸರ್ಕಾರಿ ಅಭಿಯೋಜಕ ಚಂದ್ರಮೌಳಿ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ. ಶಿವಪ್ಪ, ರಾಜ್ಯ ಕಾರ್ಯದರ್ಶಿ ರಾಜೇಶ್ವರಿ ನಾಗರಾಜ್, ಮಾಜೀ ಸೈನಿಕ ಸಿ.ಬಿ. ಪ್ರಸನ್ನ, ಜಿ.ಪಂ. ಸದಸ್ಯ ಪುಟ್ಟರಾಜು, ಧರ್ಮಸ್ಥಳ ಸಂಘದ ಯೋಜನಾಧಿಕಾರಿ ವೈ. ಪ್ರಕಾಶ್ ಅವರುಗಳು ಭಾಗವಹಿಸಲಿದ್ದಾರೆ.