ಮಡಿಕೇರಿ, ಅ. 31: ಕುಶಾಲನಗರ ಸಮೀಪದ ರಂಗಸಮುದ್ರ ಮೂಲದ ನಿವಾಸಿ; ಮಂಗಳೂರಿನ ಡಿವೈಎಸ್‍ಪಿ ಎಂ.ಕೆ. ಗಣಪತಿ ಅವರ ಸಾವಿನ ಪ್ರಕರಣ ಸಂಬಂಧ ಚೆನ್ನೈ ಮೂಲದ ಸಿಬಿಐ ಅಧಿಕಾರಿಗಳು ತನಿಖೆ ಕೈಗೊಂಡು; ನಿನ್ನೆ ಇಲ್ಲಿನ ಪ್ರಧಾನ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯನ್ನು ಬೆಂಗಳೂರು ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ವಿಶ್ವಾಸನೀಯ ಮೂಲಗಳಿಂದ ಗೊತ್ತಾಗಿದೆ.
ಪೊಲೀಸ್ ಅಧಿಕಾರಿಯಾಗಿದ್ದ ಎಂ.ಕೆ. ಗಣಪತಿ ಅವರು ತಮಗೆ ಕಿರುಕುಲ ನೀಡಿದ್ದಾಗಿ ಹಿಂದಿನ ಗೃಹ ಸಚಿವ ಕೆ.ಜೆ. ಜಾರ್ಜ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಸಂಬಂಧ; ಸ್ಥಳೀಯ ನ್ಯಾಯಾಧೀಶರು ಬೆಂಗಳೂರು ನ್ಯಾಯಾಲಯಕ್ಕೆ ಸಂಬಂಧಿಸಿದ ವರದಿಯನ್ನು ಅಲ್ಲಿಗೆ ವರ್ಗಾಯಿಸಿದ್ದಾಗಿ ಗೊತ್ತಾಗಿದೆ.