ಮಡಿಕೇರಿ, ಅ.31: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ, ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಅರ್ಹ ನೋಂದಾಯಿತ ಸಂಘ- ಸಂಸ್ಥೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ 2019-20ನೇ ಸಾಲಿನ ಪ್ರೋತ್ಸಾಹ ಧನಸಹಾಯ ನೀಡಲು 2019 ನವೆಂಬರ್ 1 ರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಕಚೇರಿಗೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸುವದು ಅರ್ಜಿ ಸಲ್ಲಿಸಲು ತಾ. 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-228490 ನ್ನು ಸಂಪರ್ಕಿಸಬಹುದು.