ಕರಿಕೆ: ಇಲ್ಲಿನ ಸರಕಾರಿ ಪೌಢಶಾಲೆಯ ಎಂಟನೆಯ ತರಗತಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಶೈಕ್ಷಣಿಕ ಉದ್ದೇಶಕ್ಕಾಗಿ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ಪ, ಮುಖ್ಯ ಶಿಕ್ಷಕ ಮನೋಹರ್, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಚೆಟ್ಟಳ್ಳಿ: ಇಲ್ಲಿನ ಚೆಟ್ಟಳ್ಳಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ನೀಡುವ ಉಚಿತ ಸೈಕಲ್‍ಗಳನ್ನು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಪಿ.ಪಿ. ಜಯಾನಂದ ವಿತರಿಸಿದರು.
ಶಾಲೆಯ ಆಡಳಿತ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ, ಶಾಲೆಯ ಪ್ರಬಾರ ಮುಖ್ಯೋಪಾಧ್ಯಾಯ ಜಿ.ಸಿ. ಸತ್ಯನಾರಾಯಣ, ಆಡಳಿತ ಮಂಡಳಿ ಸದಸ್ಯ ದಂಬೆಕೋಡಿ ಹರೀಶ್ ಹಾಗೂ ಶಿಕ್ಷಕ ವೃಂದವರು ಇದ್ದರು.