*ಗೋಣಿಕೊಪ್ಪಲು, ಅ. 31: ಚೆನ್ನಯ್ಯನಕೋಟೆ ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಇದೇ ನವೆಂಬರ್ 3ರಂದು ಅದ್ಧೂರಿ ಕನ್ನಡ ರಾಜ್ಯೋತ್ಸವದ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಅವರು ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ 4ನೇ ವರ್ಷದ ಆಚರಣೆಯಾಗಿ ಕನ್ನಡ ರಾಜ್ಯೋತ್ಸವದ 64ನೇ ವರ್ಷದ ಆಚರಣೆಯನ್ನು ವಿಭಿನ್ನತೆಯಲ್ಲಿ ನಡೆಸಲಾಗುವದು. ಚೆನ್ನಯ್ಯನಕೋಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ರಾಜ್ಯೋತ್ಸವ ಆಚರಣೆ ನಡೆಯಲಿದೆ. ಕಾರ್ಯಕ್ರಮಕ್ಕೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ಜಿ. ಬೋಪಯ್ಯ ಅವರು ಚಾಲನೆ ನೀಡಲಿದ್ದಾರೆ. ರಾಜ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಆಟೋಟ ಸ್ಪರ್ಧೆ ನಡೆಯಲಿದೆ. ನಂತರ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
ನಂತರ ಸಂಘದ ಅಧ್ಯಕ್ಷ ಅಬ್ದುಲ್ ರೆಹಮಾನ್ ಇವರ ಅಧ್ಯಕ್ಷತೆಯಲ್ಲಿ ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಭಾಷಣಕಾರರಾಗಿ ಸಾಹಿತಿ ಮತ್ತು ಬಾಳೆಲೆ ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜೆ. ಸೋಮಣ್ಣ ಭಾಗವಹಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಸದಸ್ಯ ಮೂಕೋಂಡ ವಿಜು ಸುಬ್ರಮಣಿ, ಚೆನ್ನಯ್ಯನಕೋಟೆ ಗ್ರಾ.ಪಂ. ಅಧ್ಯಕ್ಷ ಗೀತಾ, ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಸಿದ್ದಾಪುರ ಠಾಣಾಧಿಕಾರಿ ವಿ.ವಿ. ದಯಾನಂದ್, ಸ್ಥಳೀಯ ಗ್ರಾ.ಪಂ. ಸದಸ್ಯರುಗಳಾದ ಹೆಚ್.ಎಸ್. ಗಣೇಶ್, ಎಂ.ಎನ್. ವಿಜು, ಶೀಲಾ, ಸಿದ್ದಿವಿನಾಯಕ ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ಎಂ. ಮನುಕುಮಾರ್, ಸುನ್ನಿ ಜುಮ್ಮಾ ಮಸೀದಿ ಅಧ್ಯಕ್ಷ ನೌಶಾದ್, ಸಮಾಜ ಸೇವಕರುಗಳಾದ ಮೊಹಮ್ಮದ್ ಆಲಿ, ಉಂಬಾಯಿ ಉಪಸ್ಥಿತರಿರುವರು ಎಂದು ಹೇಳಿದರು.
ಗೋಷ್ಟಿಯಲ್ಲಿ ಸಂಘದ ಕೋಶಾಧಿಕಾರಿ ಆರ್.ಎ. ಶಶಿ, ಗೌರವಾಧ್ಯಕ್ಷೆ ಇಂದಿರಾಮುರುಗೇಶ್ ಉಪಸ್ಥಿತರಿದ್ದರು.