ವೀರಾಜಪೇಟೆ, ಅ. 31: ಸರಕಾರÀ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವದರಿಂದ ಗ್ರಾಮೀಣ ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗುತ್ತದೆ ಎಂದು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಷಣ್ಮುಗ ಹೇಳಿದರು.

ಕ್ಷೇತ್ರ ಶೀಕ್ಷಣಾಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪಂಚಾಯಿತಿ ಇವರ ಸಹಯೋಗದಲ್ಲಿ ಸಂತ ಅನ್ನಮ್ಮ ದ್ವಿ ಶತಮಾನೋತ್ಸವÀ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿ.ಪಂ. ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಮಾತನಾಡಿ, ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಪ್ರತಿಭಾವಂತರಿದ್ದಾರೆ. ಅವರ ಪ್ರತಿಭೆಯನ್ನು ಹೊರ ತರುವ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದರು. ತಾಲೂಕು ಪಂಚಾಯಿತಿ ಸದಸ್ಯೆ ಆಲತಂಡ ಸೀತಮ್ಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಫಾ: ಮದಲ್ಯೆಮುತ್ತು, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶ್ಯೆಲಾ ಬೀಳಗಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಧರ್, ತಾಲೂಕು ದೈಹಿಕ ಪರಿವೀಕ್ಷಕಿ ಪಿ.ಡಿ ರತಿ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಕೆ. ಪ್ರವೀಣ್, ಜಿಲ್ಲಾ ಬಿಸಿ ಊಟ ಘಟಕದ ನಿರ್ದೇಶಕ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.