ಸೋಮವಾರಪೇಟೆ, ಅ. 31: ಟಿಪ್ಪು ಸುಲ್ತಾನ್‍ನ ಇತಿಹಾಸವನ್ನು ಪಠ್ಯಕ್ರಮದಿಂದ ತೆಗೆಯಲು ಸರ್ಕಾರ ಮುಂದಾಗಿರುವದು ಸ್ವಾಗತಾರ್ಹ ಎಂದು ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಹೇಳಿದ್ದಾರೆ.

ಕೊಡಗಿನಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸಿ ಹಲವಷ್ಟು ಹೋರಾಟಗಳು ನಡೆದಿವೆ. ಟಿಪ್ಪು ಜಯಂತಿ ವಿರೋಧಿಸಿ ನಡೆದ ಹೋರಾಟದಲ್ಲಿ ದೇವಪಂಡ ಕುಟ್ಟಪ್ಪ ಅವರು ಹುತಾತ್ಮರಾಗಿದ್ದಾರೆ. ಇದೀಗ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರ ಒತ್ತಾಯದಂತೆ ಪಠ್ಯದಿಂದ ಟಿಪ್ಪು ಚರಿತ್ರೆ ತೆಗೆಯಲು ಕ್ರಮಕೈಗೊಂಡಿರುವದನ್ನು ಸಮಿತಿಯು ಸ್ವಾಗತಿಸುತ್ತದೆ ಎಂದಿದ್ದಾರೆ.