ಮಡಿಕೇರಿ, ಅ. 31: ಕೊಡಗು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಡಿಕೇರಿ, ಅ. 31: ಕೊಡಗು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಗೌಡರಿಗೆ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮ ನಡೆಯಿತು.
ಸುದರ್ಶನ ವೃತ್ತದ ಬಳಿ ಇರುವ ಅಪ್ಪಯ್ಯಗೌಡ ಅವರ ಪ್ರತಿಮೆಗೆ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್, ನಗರಸಭಾ ಆಯುಕ್ತ ರಮೇಶ್, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ
(ಮೊದಲ ಪುಟದಿಂದ) ಮತ್ತಿತರ ಪ್ರಮುಖರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಲಿಟ್ಲ್ಫ್ಲವರ್ ಶಾಲೆಯ ವಿದ್ಯಾರ್ಥಿಗಳು ನಮನ ಗೀತೆ ಹಾಡಿದರು. ನಂತರ ಮೌನಾಚರಣೆ ನಡೆಯಿತು. ಬಳಿಕ ಮೆರವಣಿಗೆ ಮೂಲಕ ಕೋಟೆ ಆವರಣಕ್ಕೆ ಆಗಮಿಸಿ ಅಪ್ಪಯ್ಯಗೌಡ ಅವರನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ ಪುಪ್ಪಗುಚ್ಚ ವಿರಿಸಿ ನಮಿಸಲಾಯಿತು.ಸಭಾ ಕಾರ್ಯಕ್ರಮಕಾವೇರಿ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ವಕೀಲ ಕೆ.ಆರ್. ವಿದ್ಯಾಧರ್, ನಮ್ಮ ಮಣ್ಣಿಗಾಗಿ ಹೋರಾಟ ಮಾಡಿದ ಹೋರಾಟಗಾರರನ್ನು ಎಂದಿಗೂ ಮರೆಯಬಾರದು. ಹೋರಾಟಗಾರರನ್ನು ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟಗಾರರ ಬಗ್ಗೆ ಅಧ್ಯಯನ ಪೀಠ ರಚನೆಯಾಗಬೇಕು ಎಂದರಲ್ಲದೆ ಅಪ್ಪಯ್ಯಗೌಡ ಅವರ ವೀರತ್ವದ ಕುರಿತು ಮಾಹಿತಿ ನೀಡಿದರು.
ಅತಿಥಿಯಾಗಿದ್ದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕøತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿನಾರಾಯಣ ಕಜೆಗದ್ದೆ ಮಾತನಾಡಿ, ಮುಂದಿನ ಪೀಳಿಗೆಗೆ ಹೋರಾಟಗಾರರ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಮುಂದಿನ ಬಾರಿ ಅಪ್ಪಯ್ಯಗೌಡರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಅಕಾಡೆಮಿಯಿಂದ ಎಲ್ಲಾ ರೀತಿಯ ಸಹಕಾರನೀಡಲಾಗುವದೆಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಮಾತನಾಡಿ, ಅಪ್ಪಯ್ಯ ಗೌಡರಂತಹ ಹೋರಾಟ ಗಾರರ ಬದುಕು ಎಲ್ಲರಿಗೂ ಮಾದರಿಯಾಗಬೇಕು. ಅಪ್ಪಯ್ಯಗೌಡ ಬ್ರಿಟಿಷರ ವಿರುದ್ಧ ದಿಟ್ಟವಾಗಿ ಹೋರಾಟ ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಇತಿಹಾಸವನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಂಬಂಧಿಸಿದ ಇಲಾಖೆ ಅಪ್ಪಯ್ಯ ಗೌಡರ ಶ್ರದ್ಧಾಂಜಲಿ ಕಾರ್ಯಕ್ರಮ ವನ್ನು ಮತ್ತಷ್ಟು ಉತ್ತಮವಾಗಿ ನಡೆಸಲು ಮುಂದಾಗಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಭಾರತೀಶ್ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ಸಿಕ್ಕಿಲ್ಲ. ಅದಕ್ಕಾಗಿ ಸಾಕಷ್ಟು ಹೋರಾಟಗಳು ನಡೆದಿವೆ. ಸಭಾ ಕಾರ್ಯಕ್ರಮದಲ್ಲಿ ಅಧಿಕಾರಿಗಳ ಅನುಪಸ್ಥಿತಿ ಬಗ್ಗೆ ವಿಷಾದಿಸಿದ ಅವರು, ಅಪ್ಪಯ್ಯಗೌಡ ಅವರು ಒಂದು ಜನಾಂಗದ ಸ್ವತ್ತಲ್ಲ ಅವರು ದೇಶದ ಸ್ವತ್ತು. ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಪ್ರಮುಖ ಪಾತ್ರ ವಹಿಸುವಂತಾಗಬೇಕು. ಅಧಿಕಾರಿಗಳು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕೆಂದರು.
ಪಟ್ಟಡ ಶಿವಕುಮಾರ್ ನಿರೂಪಿಸಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಸ್ವಾಗತಿಸಿದರು. ಅರೆಭಾಷೆ ಸಂಸ್ಕøತಿ ಸಾಹಿತ್ಯ ಅಕಾಡೆಮಿ ಸದಸ್ಯೆ ಪ್ರೇಮಾರಾಘವಯ್ಯ, ರುಕ್ಮಿಣಿ ದುಗ್ಗಪ್ಪ, ಸೋನಾ ಇವರುಗಳು ಪ್ರಾರ್ಥಿಸಿ, ಅಪ್ಪಯ್ಯಗೌಡ ಜೀವನ ಚರಿತ್ರೆ ಕುರಿತು ಲಾವಣಿ ಪದ ಹಾಡಿದರು. ಅಪ್ಪಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ತುಂತಜೆ ಗಣೇಶ್ ವಂದಿಸಿದರು.