ಸೋಮವಾರಪೇಟೆ, ಅ. 31: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬಲಿಪಾಡ್ಯಮಿ- ಧನಲಕ್ಷ್ಮೀ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿದ್ದ ಮಳೆ ಬಿಡುವು ನೀಡಿದ್ದರಿಂದ ಹಬ್ಬದ ಸಂಭ್ರಮ ಎಲ್ಲೆಡೆ ಕಂಡುಬಂತು. ಪಟ್ಟಣದ ಅಂಗಡಿ ಮುಂಗಟ್ಟುಗಳಲ್ಲಿ ಧನಲಕ್ಷ್ಮೀ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು.

ಅಂಗಡಿಗಳನ್ನು ಹೂವು, ತಳಿರು ತೋರಣಗಳಿಂದ ಅಲಂಕರಿಸಿ ಧನಲಕ್ಷ್ಮೀ ಪೂಜೆ ನೆರವೇರಿಸಿದರು. ಪಟ್ಟಣದಲ್ಲಿ ಸಿಹಿತಿಂಡಿ, ಹೂವು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿತ್ತು. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ದೇವಾಲಯಗಳಲ್ಲಿ ದಿನದ ಅಂಗವಾಗಿ ವಿಶೇಷ ಪೂಜೆಗಳು ನಡೆದವು.