ಮಡಿಕೇರಿ, ಅ. 31: ರಾಜ್ಯ ಬಾಲ ಭವನ ಸೊಸೈಟಿ, ತಾಲೂಕು ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಚಿತ್ರಕಲೆ ಸ್ಪರ್ಧಾ ಕಾರ್ಯಕ್ರಮ ಹಾಗೂ ಕಲಾಶ್ರೀ ಆಯ್ಕೆ ಶಿಬಿರವು ಬುಧವಾರ ನಗರದ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.

ತಾಲೂಕು ಪಂಚಾಯಿತಿ ಇಒ ಲಕ್ಷ್ಮಿ ಮಾತನಾಡಿ, ಕಲಾಶ್ರೀ ಶಿಬಿರ ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಎಲ್ಲರಲ್ಲೂ ಪ್ರತಿಭೆ ಇರುತ್ತದೆ, ಗೆದ್ದರು ಸೋತರು ಎರಡನ್ನು ಕೂಡ ಸಮಚಿತ್ತದಿಂದ ಸ್ವೀಕರಿಸಬೇಕು. ಗೆದ್ದಾಗ ಬೀಗದೆ ಸೋತಾಗ ಕುಗ್ಗದೆ ಎರಡನ್ನು ಸಮನಾಗಿ ಸ್ವೀಕರಿಸಿದಾಗ ಮಾತ್ರ ಜೀವನದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದÀರು.

ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಅರುಂಧತಿ ಅವರು ಕಲಾಶ್ರೀ ಶಿಬಿರ ಎಂಬದು ಪ್ರತಿಭಾನ್ವೇಷಣೆ ಕಾರ್ಯಕ್ರಮ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದ ಜೊತೆಗೆ ಇತರೆ ಪಠ್ಯೇತರ ಚಟುವಟಿಕೆ ಗಳಲ್ಲೂ ಭಾಗವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಶೋಭಾ, ಸಂಪನ್ಮೂಲ ವ್ಯಕ್ತಿಗಳಾದ ಪ್ರಸನ್ನ, ಭಾರತಿ ರಮೇಶ್, ಭರತ್ ಕೋಡಿ, ಸರಸ್ವತಿ, ಕೋಮಲ, ಶಿಕ್ಷಕರಾದ ಶೀಲಾ, ಸವಿತ ಕೀರ್ತನ್, ಇತರರು ಪಾಲ್ಗೊಂಡಿದ್ದರು.