ಕೂಡಿಗೆ, ನ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಮಿರವಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್ ಕಾಳಪ್ಪ ಗ್ರಾ.ಪಂ ವ್ಯಾಪ್ತಿಗೆ ಶುದ್ಧ ಕುಡಿಯುವ ನೀರಿನ ಘಟಕ ತೆರೆಯುವ ಬಗ್ಗೆ ಕಳೆದ ಸಭೆಯಲ್ಲಿ ಚರ್ಚೆ ನಡೆಸಿದ್ದರೂ ಯಾವದೇ ಪ್ರಯೋಜನವಾಗಿಲ್ಲ.
ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ರಸ್ತೆ ಕಾಮಗಾರಿ ಬಗ್ಗೆ ಎಲ್ಲಾ ಸದಸ್ಯರು ಗಮನಹರಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿಗಳ ಬಗ್ಗೆ ಸುಧೀಘüð ಚರ್ಚೆಗಳು ನಡೆದವು.
ಸಭೆಯಲ್ಲಿದ್ದ ಎಲ್ಲಾ ಸದಸ್ಯರು ತಮ್ಮ ತಮ್ಮ ವಾರ್ಡ್ನ ಸಮಸ್ಯೆ ಮತ್ತು ಶುಚಿತ್ವಕ್ಕೆ ಹೆಚ್ಚು ಒತ್ತುಕೊಡುವಂತೆ ಸಭೆಯಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಂಡರು.
ಈ ಸಂದರ್ಭ ಅಧ್ಯಕ್ಷೆ ಲಕ್ಷಿö್ಮ ಮಾತನಾಡುತ್ತಾ, ಈ ಸಭೆಯ ಮಾಹಿತಿಯನ್ನು ಹಂತ ಹಂತವಾಗಿ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ಸದಸ್ಯರ ಸಹಕಾರ ಮುಖ್ಯ. ಉತ್ತಮವಾಗಿ ಕೆಲಸವನ್ನು ನಿರ್ವಹಿಸಲು ಸದಸ್ಯರುಗಳ ಸಹಕಾರಬೇಕು ಎಂದರು.
ಈ ಸಂದರ್ಭ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಆಯಿಷಾ, ಸಭೆಗೆ ಸರಕಾರದ ಸುತ್ತೋಲೆಗಳನ್ನು ತಿಳಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸಣ್ಣಪ್ಪ ಸೇರಿದಂತೆ ಸರ್ವ ಸದ್ಯಸರು ಹಾಜರಿದ್ದರು.