ಕೂಡಿಗೆ, ನ. 1: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಡಿಪಿ ಸಭೆಯು ಗ್ರಾ.ಪಂ. ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮೀ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಗೆ ಆಹಾರ ಇಲಾಖೆಯ ಅಧಿಕಾರಿ ಬಾರದ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯ ಭಾಸ್ಕರ್ ನಾಯಕ್ ಅಸಮಾಧಾನ ವ್ಯಕ್ತಪಡಿಸಿ, ಅಧಿಕಾರಿಯ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆಯುವಂತೆ ಅಭಿವೃದ್ಧಿ ಅಧಿಕಾರಿಗೆ ಒತ್ತಾಯಿಸಿದರು. ನಂತರ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿ ನೇಮಕ ಮಾಡುವ ಬಗ್ಗೆ ಸರ್ವ ಸದಸ್ಯರು ಒತ್ತಾಯ ಮಾಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಪಶುಪಾಲನಾ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಮಾಹಿತಿಗಳನ್ನು ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಪಂಚಾಯಿತಿ ಸದಸ್ಯ ಗಣೇಶ್. ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಜರಿದ್ದರು.