ಮಡಿಕೇರಿ: ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆ ತಾ. 2 ರಂದು (ಇಂದು) ಮಧ್ಯಾಹ್ನ 11 ಗಂಟೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್, ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಲು ಸಭೆ ತಾ. 2 ರಂದು ಮಧ್ಯಾಹ್ನ 12.30 ಗಂಟೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ಕೋರಿದ್ದಾರೆ.
‘ಮಂಥನ’ ಕಾರ್ಯಕ್ರಮ
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ‘ಮಂಥನ’ ಜಾನಪದ ಸೊಗಡಿನ ಅನಾವರಣ ಕಾರ್ಯಕ್ರಮ ತಾ. 2 ರಂದು (ಇಂದು) ಮಧ್ಯಾಹ್ನ 3.30 ಗಂಟೆಗೆ ನಗರದ ಹೊರ ವಲಯದಲ್ಲಿರುವ ವೈದ್ಯಕೀಯ ಕಾಲೇಜಿನ ‘ಸಿ’ ವಿಭಾಗದ ಸಭಾಂಗಣದಲ್ಲಿ ನಡೆಯಲಿದೆ.
ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ. ಅನಂತಶಯನ, ತಾಲೂಕು ಅಧ್ಯಕ್ಷ ಅನಿಲ್ ಎಚ್.ಟಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಕೆ.ಬಿ. ಕಾರ್ಯಪ್ಪ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ನಿರ್ದೇಶಕ ಡಾ. ಬಿ.ಜೆ. ಮಹೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲ ಡಾ. ವಿಶಾಲ್‍ಕುಮಾರ್, ವೈದ್ಯಕೀಯ ಅದೀಕ್ಷಕ ಡಾ. ಲೋಕೇಶ್, ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ ಇತರರು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.