ಮಡಿಕೇರಿ, ನ. ೨: ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಸಲಹೆಯಿತ್ತರು.

ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಕಾರದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಶನಿವಾರ ನಡೆದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಾದಕ ವಸ್ತುಗಳ ಉತ್ಪಾದನೆ ಮತ್ತು ಮಾರಾಟ ಮಾಡುವದು ಕಂಡುಬAದರೆ ಒಂದು ಲಕ್ಷದಿಂದ ೨ ಲಕ್ಷ ರೂ ವರೆಗೆ ದಂಡ ಹಾಗೂ ೧೦ ರಿಂದ ೨೦ ವರ್ಷಗಳವರೆಗೆ ಸೆರೆವಾಸ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇತ್ತೀಚಿನ ದಿನಗಳಲ್ಲಿ ಯುವಜನರು ಗಾಂಜಾ, ಹೆರಾಯಿನ್ ಮತ್ತಿತರ ಮಾದಕ ವಸ್ತುಗಳ ವ್ಯಸನಿಗಳಾಗುತ್ತಿರುವದು ಕಂಡು ಬರುತ್ತದೆ. ಮಾದಕ ವಸ್ತುಗಳಿಗೆ ದಾಸರಾದರೆ ಇಡೀ ಕುಟುಂಬವೇ ತೊಂದರೆ ಅನುಭವಿಸಬೇಕಾಗುತ್ತದೆ. ಮದ್ಯ ವ್ಯಸನಿಗಳು ಪ್ರತಿನಿತ್ಯ ಆತ್ಮಹತ್ಯೆಗೆ ಮುಂದಾಗುತ್ತಿದ್ದು, ಇದು ಕೊನೆಯಾಗಬೇಕು ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋ ವೈದ್ಯರಾದ ಡಾ.ರೂಪೇಶ್ ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪಾರಿಣಾಮ ಕುರಿತು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಮಾಹಿತಿ ನೀಡಿದರು.

ಮನಃ ಶಾಸ್ತçಜ್ಞರಾದ ಡಾ.ಸತೀಶ್ ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪಾರಿಣಾಮ ಕುರಿತು ಸಾಕ್ಷö್ಯಚಿತ್ರದ ಮೂಲಕ ಮಾಹಿತಿ ನೀಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್. ವಿಜಯನ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳುವತ್ತ ಚಿಂತಿಸಬೇಕು ಎಂದರು. ಮದ್ಯ ಹಾಗೂ ಮಾದಕ ವಸ್ತುಗಳನ್ನು ಸೇವಿಸುವದಿಲ್ಲ ಎಂಬ ಪ್ರತಿಜ್ಞಾ ವಿಧಿಯನ್ನು ಇದೇ ಸಂದರ್ಭದಲ್ಲಿ ಸ್ವೀಕರಿಸಲಾಯಿತು.

ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಮೌಲ್ಯ ಹಾಗೂ ಜಯಶ್ರೀ ಪ್ರಾರ್ಥಿಸಿದರು. ಉಪನ್ಯಾಸಕರಾದ ನಂದೀಶ್ ನಿರೂಪಿಸಿ, ವಂದಿಸಿದರು.