ಮಡಿಕೇರಿ, ನ. ೨: ಪ್ರತಿಭಾ ಕಾರಂಜಿಯು ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಪ್ರತಿಭೆಯನ್ನು ಅನಾವರಣ ಮಾಡಲು ಸೂಕ್ತ ಅವಕಾಶವಾಗಿದೆ. ಮಕ್ಕಳು ಜೀವನದಲ್ಲಿ ಗುರಿ ಹೊಂದಿರಬೇಕು. ಅದರ ಹಿಂದೆ ಗುರು ಇದ್ದಾಗ ಮಾತ್ರ ಯಶಸ್ಸು ಸಿಗುತ್ತದೆ ಎಂದು ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಜೋಸೆಫರ್ ಶಾಲೆಯಲ್ಲಿ ಶನಿವಾರ ನಡೆದ ಮಡಿಕೇರಿ ತಾಲೂಕು ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ತಾ.ಪA.ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಅವರು ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಅವರ ಪ್ರತಿಭೆಯನ್ನು ಗುರುತಿಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಮಚ್ಚಾಡೊ ಮಾತನಾಡಿ ಮಕ್ಕಳಲ್ಲಿರುವ ಪ್ರತಿಭೆ ನಿರಂತರವಾಗಿ ಹೊರ ಹೊಮ್ಮುತ್ತಲ್ಲೇ ಇರಬೇಕು ಎಂದರು.

ಸAತ ಜೋಸೆಫರ ಪ್ರೌಢಶಾಲೆಯ ಸಂಚಾಲಕರಾದ ಸಿಸ್ಟರ್ ಅಂಥೋಣಿಯಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ ಮಾತನಾಡಿದರು.

ಕರಾಪ್ರಾಶಾಶಿ ಸಂಘದ ಅಧ್ಯಕ್ಷ ಮೋಹನ ಪೆರಾಜೆ, ಕರಾಪ್ರೌಶಾಸಶಿ ಸಂಘದ ಅಧ್ಯಕ್ಷ ಎನ್.ಕೆ. ಮೆಹಬೂಬ್ ಸಾಬ್, ಅನುದಾನಿತ ಪ್ರೌಶಾಸಶಿ. ಸಂಘದ ಅಧ್ಯಕ್ಷ ವಿಲ್ಫೆçÃಡ್ ಕ್ರಾಸ್ತಾ, ತಾದೈಶಿಶಿ ಸಂಘದ ಅಧ್ಯಕ್ಷ ಬಿ.ಟಿ. ಪೂರ್ಣೇಶ್, ಕರಾಎಸ್‌ಸಿಎಸ್‌ಟಿ ಪ್ರಾ.ಮಾ.ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣಪ್ಪ ಎಚ್.ಬಿ. ಶಾಲಾ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಇತರರು ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಸ್ವಾಗತಿಸಿದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆಯು ರಂಜಿತ್ ನಿರೂಪಿಸಿದರು. ಶಿಕ್ಷಣ ಸಂಯೋಜಕ ಮಾರುತಿ ವಂದಿಸಿದರು.